Home ಟಾಪ್ ಸುದ್ದಿಗಳು ರಾಜಕೀಯ ಕಾರಣಕ್ಕೆ ಸಿದ್ದರಾಮಯ್ಯರಿಂದ ಹಿಜಾಬ್ ಪ್ರಸ್ತಾಪ: ಬೊಮ್ಮಾಯಿ

ರಾಜಕೀಯ ಕಾರಣಕ್ಕೆ ಸಿದ್ದರಾಮಯ್ಯರಿಂದ ಹಿಜಾಬ್ ಪ್ರಸ್ತಾಪ: ಬೊಮ್ಮಾಯಿ

ಬೆಂಗಳೂರು: ಹಿಜಾಬ್ ನಿಷೇಧ ಆಗಿಯೇ ಇಲ್ಲ. ಆದರೆ ರಾಜಕೀಯ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, 1984 ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೊಡ್ ಮಾಡಲಾಗಿದ್ದು, ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಈಗಾಗಲೇ ಕೊರ್ಟ್ ನಲ್ಲಿ ಪ್ರಕರಣ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು ಎಂದರು.

Join Whatsapp
Exit mobile version