Home ಟಾಪ್ ಸುದ್ದಿಗಳು ಸಿದ್ದರಾಮಯ್ಯಗೆ ಸಚಿವ ಅಶ್ವಥ್ ನಾರಾಯಣರಿಂದ ಕೊಲೆ ಬೆದರಿಕೆ; ಶೋಷಿತ ಸಮುದಾಯಗಳಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ

ಸಿದ್ದರಾಮಯ್ಯಗೆ ಸಚಿವ ಅಶ್ವಥ್ ನಾರಾಯಣರಿಂದ ಕೊಲೆ ಬೆದರಿಕೆ; ಶೋಷಿತ ಸಮುದಾಯಗಳಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಸಚಿವ ಅಶ್ವಥ್ ನಾರಾಯಣ ಅವರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.


ಪ್ರತಿಭಟನಾ ಸಮಾವೇಶದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಮಾವಳ್ಳಿ ಶಂಕರ್, ಪ್ರೊ. ಲಕ್ಷ್ಮೀ ನರಸಿಂಹಯ್ಯ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಬಂಜಾರ ಸಮಾಜದ ಅನಂತ್ ನಾಯ್ಕ್ , ಸಂಚಾಲಕರಾದ ಎಣ್ಣೆಗೆರೆ ವೆಂಕಟರಾಮಯ್ಯ, ಎನ್. ಅನಂತ ನಾಯ್ಕ, ಜಿ.ಡಿ.ಗೋಪಾಲ್, ಸುರೇಶ್ ಎಂ.ಲಾತೋರ್, ಮಹಾತೇಶ್ ಕವಲಗಿ ಸೇರಿದಂತೆ ವಿವಿಧ ಸಮಾಜದ ಅನೇಕ ಮುಖಂಡರು ಹಾಜರಿದ್ದರು.


ಒಕ್ಕೂಟದ ಅಧ್ಯಕ್ಷರಾದ ಕೆ.ಎಂ.ರಾಮಚಂದ್ರಪ್ಪ, ಮಾವಳಿ ಶಂಕರ್, ಡಾ.ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ಪದೇ ಪದೇ ಹೀನಾಯ ಮಾತುಗಳ ಮೂಲಕ ಸಿದ್ದರಾಮಯ್ಯ ಅವರನ್ನು ಅವಮಾನಿಸುತ್ತಿರುವ ಶಾಸಕ ಸಿ.ಟಿ.ರವಿ, ಅಶ್ವತ್ಥ ನಾರಾಯಣ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು,ಇದುವರೆಗೂ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈ ಕೈಗೊಳ್ಳದೇ ನಿರ್ಲಕ್ಷ್ಯ ದೋರಣೆ ವಹಿಸಿರುವ ಮಂಡ್ಯ ಪೋಲಿಸ್ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.


ಶೋಷಿತ ಸಮುದಾಯಗಳ ಪರವಾಗಿ ಯಾವಗಲೂ ದ್ವನಿ ಎತ್ತುವ ನಾಯಕರೆಂದರೆ ಸಿದ್ದರಾಮಯ್ಯ ನವರು ಮಾತ್ರ. ಈ ಹಿನ್ನೆಲೆಯಲ್ಲಿ ಎಲ್ಲ ಶೋಷಿತ ಸಮುದಾಯಗಳು ಒಟ್ಟಾಗಿ ಈ ವೇದಿಕೆಯನ್ನು ಸೃಷ್ಟಿಸಿದ್ದೇವೆ. ಅಸ್ವಸ್ಥ ಅವಿವೇಕದಿಂದ ಆಶ್ವಥ ನಾರಾಯಣ ಅವರು ನಡೆದುಕೊಂಡಿದ್ದಾರೆ ಎಂದು ತಿಳಿಸಿದರು.


ಸಂಚಲನಾ ಸಮಿತಿ ಅಧ್ಯಕ್ಷ ಪ್ರೋ ಲಕ್ಷ್ಮೀ ನರಸಿಂಹಯ್ಯ ಮಾತನಾಡಿ, ಈ ಸರ್ಕಾರದಲ್ಲಿ ಯಾವ ಮಂತ್ರಿಗೂ ಯಾವುದೇ ರೀತಿಯ ವೈಚಾರಿಕತೆ ಇಲ್ಲವಾಗಿದೆ. ಅಶ್ವಥ್ ನಾರಾಯಣ ಅವರನ್ನು ಕ್ಯಾಬಿನೆಟ್’ನಿಂದ ವಜಾಗೊಳಿಸಬೇಕು. ಅವರಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹೇಳಿದರು.

Join Whatsapp
Exit mobile version