ಸಿದ್ದರಾಮಯ್ಯ ಚೇತರಿಕೆ; ಇನ್ನೆರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ

Prasthutha|

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಈಗ ಚೇತರಿಸಿಕೊಂಡಿದ್ದಾರೆ.
ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಸಿದ್ದರಾಮಯ್ಯ ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದು, ಜ್ವರದಿಂದ ಬಳಲುತ್ತಿದ್ದ ಅವರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರು ಎರಡು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

- Advertisement -