ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರ ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಇಡೀ ದೇಶದ ಪತ್ರಕರ್ತರಿಗೆ ಮೋದಿ ನಿಷೇಧ ಹೇರಿದ್ದಾರಲ್ಲಾ? ಬಿಜೆಪಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -

ಐಎನ್ ಡಿಐಎ ಮೈತ್ರಿ ಕೂಟದಿಂದ 14 ಮಂದಿ ಪತ್ರಕರ್ತರನ್ನು ಬಹಿಷ್ಕರಿಸಲಾಗಿತ್ತು. ಈ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿ ಎನ್ ಡಿಎ ನಾಯಕರು, ಬಿಜೆಪಿ ನಾಯಕರು ಮೈತ್ರಿಕೂಟದ ವಿರುದ್ಧ ವ್ಯಂಗ್ಯವಾಡಿದ್ದರು. ಸದ್ಯ ಸಿಎಂ ಸಿದ್ದರಾಮಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ,
ಮಾನ್ಯ ಜೆಪಿ ನಡ್ಡಾ ಅವರೇ, ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ “ಇಂಡಿಯಾ” ಮರೆತಿಲ್ಲ. ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು ಎಂದು ಸಿದ್ದಿಕ್ ಕಪ್ಪನ್, ಮೊಹಮ್ಮದ್ ಝುಬೇರ್ ಅಜಿತ್ ಓಝಾ, ಜಸ್ಪಾಲ್ ಸಿಂಘ್, ಸಜದ್ ಗುಲ್ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.
ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು
ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

• ರಾಕೇಶ್ ಸಿಂಗ್ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ
• ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶಮರಳು ದಂಧೆ ಕುರಿತು ವರದಿ ಮಾಡಿದ್ದಕ್ಕೆ
• ಜಿ ಮೋಸೆಸ್ ತಮಿಳುನಾಡು ಗೋಮಾಳ ಅಕ್ರಮ ಮಾರಾಟ ಕುರಿತು ವರದಿ
• ಪರಾಗ್ ಭುಯಾನ್ ಅಸ್ಸಾಮ್, ಎಸ್ಐನೇಮಕಾತಿ ಹಗರಣ ಕುರಿತು ವರದಿ
• ಗೌರಿ ಲಂಕೇಶ್ ಕರ್ನಾಟಕ ಕೋಮುವಾದ ವಿರೋಧಿಸಿದ್ದಕ್ಕೆ.
ಪತ್ರಿಕಾ ಸ್ವಾತಂತ್ರ್ಯ ಅವಸಾನ
ಪತ್ರಿಕಾ ಸ್ವಾತಂತ್ಯ್ರದಲ್ಲಿ ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!! 2015 – 136ನೇ ಸ್ಥಾನ, 2019 – 140ನೇ ಸ್ಥಾನ, 2022 – 150ನೇ ಸ್ಥಾನ, 2023 – 161ನೇ ಸ್ಥಾನ ಪಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ನಲ್ಲಿ ತಿಳಿಸಿದ್ದಾರೆ.

- Advertisement -

ಪ್ರಧಾನಿ ಮೋದಿ ಸಾಕ್ಷ್ಯ ಚಿತ್ರ ನಿಷೇಧಿಸಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ
” ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ…!! ” ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ಕಿಡಿಕಾರಿದ್ದಾರೆ.