ಬೆಂಗಳೂರು : ಕೊರೋನಾ ಎರಡನೇ ಅಲೆಯಲ್ಲಿ ಹೆಚ್ಚು ಜನರು ಸಾಯಲು ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಡಿಯೂರಪ್ಪ ಸರ್ಕಾರ ಎರಡನೇ ಅಲೆಯನ್ನು ತಡೆಯಲು ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಂಡಿದ್ದರೆ, ಇಷ್ಟೊಂದು ಜನ ಸಾಯುತ್ತಿರಲಿಲ್ಲ, ಎರಡನೇ ಅಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿಲ್ಲ. ಹೆಚ್ಚು ಜನರು ಸಾಯಲು ಯಡಿಯೂರಪ್ಪ ಸರ್ಕಾರ ಕಾರಣ ಎಂದು ಕಿಡಿಕಾರಿದ್ದಾರೆ.
ರಾಜ್ಯಕ್ಕೆ ಕೊರೊನಾ ಅಪ್ಪಳಿಸಿ ಒಂದು ವರ್ಷ ಮೂರು ತಿಂಗಳು ಆಗಿದೆ. ಅಕ್ಟೋಬರ್ ನಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ. ಎರಡನೇ ಅಲೆಯನ್ನು ತಡೆಯಲು ಮುನ್ನಚ್ಚೆರಿಕೆ ಕ್ರಮಗಳನ್ನು ಮಾಡಿಕೊಂಡಿದ್ದರೆ, ಇಷ್ಟೊಂದು ಜನ ಸಾಯುತ್ತಿರಲಿಲ್ಲ. ರೋಗ ಬಂದವರಿಗೆ ಬೆಡ್ ಸಿಗಲಿಲ್ಲ, ಆಕ್ಸಿಜನ್ ಬೆಡ್ ಸಿಗಲಿಲ್ಲ, ಅಂಬ್ಯುಲೆನ್ಸ್, ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ಬಹಳ ಜನ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.