Home ಟಾಪ್ ಸುದ್ದಿಗಳು ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕುಜಡ್ಕಗೆ ಸಿದ್ದರಾಮಯ್ಯ ಸಲ್ಯೂಟ್ !

ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕುಜಡ್ಕಗೆ ಸಿದ್ದರಾಮಯ್ಯ ಸಲ್ಯೂಟ್ !

ಬೆಂಗಳೂರು: ಉತ್ತರ ಪ್ರದೇಶದ ಲಖಿಂಪುರ ರೈತರ ಹತ್ಯೆಯನ್ನು ಕುರಿತು ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕುಜಡ್ಕ ರಚಿಸಿರುವ ವ್ಯಂಗ್ಯ ಚಿತ್ರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶಹಬ್ಬಾಶ್ ಗಿರಿ ನೀಡಿದ್ದಾರೆ. ದೇಶದ ಜನತೆಯ ಮನದಾಳದ ಆಕ್ರೋಶವನ್ನು ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕುಜಡ್ಕ ಅವರು ತನ್ನ ಕಲಾತ್ಮಕ ರೇಖೆಗಳಲ್ಲಿ ಅಭಿವ್ಯಕ್ತಿಗೊಳಿಸಿದ್ದಾರೆ. ಸಲ್ಯೂಟ್! ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಲಖಿಂಪುರದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಷ್ ಚಲಾಯಿಸುತ್ತಿದ್ದ ವಾಹನ ಹರಿಸಿದ ಪರಿಣಾಮ ನಾಲ್ವರು ರೈತರು ಮೃತಪಟ್ಟಿದ್ದರು. ಬಳಿಕ ನಡೆದ ಹಿಂಸಾಚಾರದಲ್ಲಿ ಐದು ಮಂದಿ ಮೃತಪಟ್ಟಿದ್ದರು.

Join Whatsapp
Exit mobile version