ಮಗ ಮೃತಪಟ್ಟಾಗ ಮೋದಿ, ಸುಷ್ಮಾ ಸ್ವರಾಜ್ ಬಳಿ ಸಹಾಯ ಪಡೆದಿದ್ದೇನೆ ಎನ್ನುವುದು ಶುದ್ಧ ಸುಳ್ಳು: ಸಿದ್ದರಾಮಯ್ಯ

Prasthutha|

ಬೆಳಗಾವಿ: ನನ್ನ ಮಗ ಮೃತಪಟ್ಟಾಗ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರ ಬಳಿ ಸಹಾಯ ಪಡೆದಿದ್ದೇನೆ ಎನ್ನುವುದು ಶುದ್ಧ ಸುಳ್ಳು. ನಾನು ಅವರನ್ನು ಸಂರ್ಕಿಸಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ಚಿಕ್ಕಪ್ಪ ಕುಮಾರ ಸ್ವಾಮಿ ಕಾಂಗ್ರೆಸ್ ನಾಯಕರ ಮೇಲೆ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ರಾಕೇಶ್​ ಮೃತಪಟ್ಟಾಗ ಮೋದಿ ಅವರು ಮಾಡಿದ ಸಹಾಯವನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂದಿದ್ದಾರೆ. ಇದಕ್ಕೆ ಸಿಎಂ ಬೆಳಗಾವಿಯ ಗೋಕಾಕ್​ನಲ್ಲಿ ಪ್ರತಿಕ್ರಿಸಿದ್ದಾರೆ.

ನನ್ನ ಮಗ ವಿದೇಶದಲ್ಲಿ ಮೃತಪಟ್ಟಿದ್ದ. ಮೃತದೇಹ ಇಲ್ಲಿಗೆ ತರಿಸಿ ಅಂತ್ಯಕ್ರಿಯೆ ಮಾಡಿದ್ದೇವೇ ಅಷ್ಟೇ. ಆ ಸಂದರ್ಭದಲ್ಲಿ ಸಹಾಯಕ್ಕಾಗಿ ಮೋದಿ ಸೇರಿದಂತೆ ಯಾರನ್ನು ಸಂಪರ್ಕಿಸುವ ಪ್ರಮೇಯವೇ ಬಂದಿಲ್ಲ. ಇವರೆಲ್ಲಾ ಸುಳ್ಳು ಹೇಳುತ್ತಿದ್ದಾರೆ. ಪ್ರಜ್ವಲ್ ಪ್ರಕರಣದ ಕುರಿತು ಎಸ್.ಐ.ಟಿ ವರದಿಯೇ ಅಂತಿಮ. ವರದಿ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.



Join Whatsapp