ವಾಲ್ಮೀಕಿ ನಿಗಮ, ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು: ವಿಜಯೇಂದ್ರ

Prasthutha|

ಬೆಂಗಳೂರು: ಸಾವಿರಾರು ಕೋಟಿ ರೂ. ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ನಡೆಸಿದರೆ ಸಾಲದು. ಸಿಎಂಗೆ ನಿಜವಾಗಿಯೂ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಪಾಲುದಾರರಾಗಿದ್ದಾರೆ. ಸಾವಿರಾರು ಕೋಟಿ ರೂ. ಬೆಲೆಬಾಳುವ ನಿವೇಶನಗಳಿಗೆ ಮೈಸೂರು ಮುಡಾ ಹಗರಣ ನಡೆದಿದೆ. ಈ ಹಗರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಸದನದ ಹೊರಗೆ ಹೋರಾಟ ನಡೆಸಿದ್ದೇವೆ. ಸದನದ ಒಳಗೆ ಕೂಡ ಹೋರಾಟ ಮುಂದುವರೆಯಲಿದೆ. ಅಲ್ಲದೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.



Join Whatsapp