ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದ ಶ್ರೀರಾಮುಲು !

Prasthutha|

ಬಳ್ಳಾರಿ: ಭಗವಂತ ಅವಕಾಶ ಕೊಟ್ಟರೆ ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

- Advertisement -


ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಹಿಂದುಳಿದ ಸಮುದಾಯ ಎಂಬುದು ಬಂದಾಗ ನಾನು ಸಿದ್ದರಾಮಯ್ಯ ಅವರು ಒಂದೇ. ಹಿಂದುಳಿದ ಜಾತಿಗಳನ್ನು ಒಂದು ಮಾಡುವ ಪ್ರಯತ್ನವನ್ನು ಸಿದ್ದರಾಮಯ್ಯ ಮತ್ತು ನಾವು ಮಾಡುತ್ತಿದ್ದೇವೆ. ಹಿಂದುಳಿದ ಸಮುದಾಯಗಳು ಒಂದಾದರೆ ರಾಜ್ಯ ಮತ್ತು ದೇಶದಲ್ಲಿ ಕ್ರಾಂತಿ ಮಾಡಬಹುದು ಎಂದರು.


ನಾವು ರಾಜಕೀಯಗೋಸ್ಕರ ಮಾತನಾಡುತ್ತೇವೆ. ವೈಯಕ್ತಿಕವಾಗಿ ನನಗೂ ಸಿದ್ದರಾಮಯ್ಯ ಅವರಿಗೂ ಏನು ಇರುವುದಿಲ್ಲ. ನನಗೂ ಬಿಜೆಪಿಯಿಂದ ಮುಖ್ಯಮಂತ್ರಿಯಾಗುವ ಅವಕಾಶ ಬಂದರೆ ಹಿಂದುಳಿದ ಸಮುದಾಯದಿಂದ ಆಗಲಿ, ರಾಮುಲು ಮುಖ್ಯಮಂತ್ರಿ ಆಗಬೇಕೆಂದು ಸಿದ್ದರಾಮಯ್ಯ ಅವರನ್ನು ಕೇಳಿದರೆ ಅವರೂ ಒಪ್ಪುತ್ತಾರೆ ಎಂದು ತಿಳಿಸಿದರು.

Join Whatsapp