ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.
ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು
ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಸಿದ್ದರಾಮಯ್ಯ ಅವರು ಕೂಡಲೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗು ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು