ಸಿದ್ದರಾಮಯ್ಯ ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಬರಲಿ: ಸಿಎಂ ಪರ ಈಶ್ವರಪ್ಪ ಬ್ಯಾಟಿಂಗ್

Prasthutha|

ಶಿವಮೊಗ್ಗ: ಸಿದ್ದರಾಮಯ್ಯ ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

- Advertisement -


ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಸಿಎಂ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದರು.


ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಅವರು ಕೂಡ ತನಿಖೆಗೆ ಸಹಕಾರ ಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

- Advertisement -

ಆದರೆ ಅವರ ಶ್ರೀಮತಿಯವರನ್ನು ಎಲ್ಲಿ ಇದರಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು.



Join Whatsapp