Home ಟಾಪ್ ಸುದ್ದಿಗಳು ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಬೇಕು: ಸಿಎಂ ಸಮ್ಮುಖದಲ್ಲೇ ಚಂದ್ರಶೇಖರ ಸ್ವಾಮಿ ಹೇಳಿಕೆ

ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಬೇಕು: ಸಿಎಂ ಸಮ್ಮುಖದಲ್ಲೇ ಚಂದ್ರಶೇಖರ ಸ್ವಾಮಿ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅನುಭವ ಪಡೆದಿದ್ದಾರೆ. ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ  ಅಗ್ರಹಿಸಿದರು.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಮಾತ್ರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ ಎಂದರು.

ಚಂದ್ರಶೇಖರ ಸ್ವಾಮಿ  ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು. ಬೆಂಗಳೂರು ಒಂದಾಗಿ ಉಳಿಯಬೇಕು. ಅದನ್ನು ಭಾಗ ಮಾಡುವ ಪ್ರಯತ್ನ ಹಿಂದೆ ನಡೆದಿತ್ತು. ಹೋರಾಟದ ಮೂಲಕ ಅದನ್ನು ತಡೆಯಲು ಸಾಧ್ಯವಾಗಿತ್ತು. ಈಗ ಮತ್ತೆ ಭಾಗ ಮಾಡುವ ಕೂಗು ಎದ್ದಿದೆ. ದಯವಿಟ್ಟು ಭಾಗ ಮಾಡಬಾರದು ಎಂದು ಮನವಿ ಮಾಡಿದರು.

Join Whatsapp
Exit mobile version