Home ಟಾಪ್ ಸುದ್ದಿಗಳು ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು...

ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು ; ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಸಿಎಂ ಬೊಮ್ಮಾಯಿ ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ವಿಜಯಪುರ ಮತ್ತು ಕಾಪು ಪೊಲೀಸರು ಸಂಘಪರಿವಾರದ ನಾಯಕರು ಧರಿಸುವಂತಹ ದಿರುಸ ಧರಿಸಿ ತೆಗೆದ ಭಾವಚಿತ್ರಗಳನ್ನು ಟ್ವಿಟ್ಟರ್ ಗೆ ಲಗತ್ತಿಸಿದ್ದಾರೆ.
ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೊಲೀಸ್ ಗಿರಿಯ ದೌರ್ಜನ್ಯ…
ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ ಇದಕ್ಕೆಲ್ಲಾ ಸಿಎಂ ಬೊಮ್ಮಾಯಿ ಬಹಿರಂಗ ಬೆಂಬಲ.
ರಾಜ್ಯದಲ್ಲಿ ಸರ್ಕಾರ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಕರ್ನಾಟಕ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಆದಿತ್ಯನಾಥ್ ಅವರ ಉತ್ತರ ಪ್ರದೇಶದ ಜಂಗಲ್ ರಾಜ್ ಅಲ್ಲ, ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version