ಬೆಂಗಳೂರು: ಹಿಂದಿನ ಪತ್ರಕರ್ತರು ಶೋಷಿತರ, ದಮನಿತರ ದನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿನ ಪತ್ರಕರ್ತರ ಸಾಮಾಜಿಕ ಕಳಕಳಿ ಮತ್ತು ಬದ್ಧತೆಗಳನ್ನು ಉಲ್ಲೇಖಿಸಿದರು.
ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ಪತ್ರಕರ್ತರಿದ್ದರು, ಶೋಷಿತರ, ದಮನಿತರ ದನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಅವರು ಮಾಡುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿದರು.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂ ಸಂಪೂರ್ಣ ಸಾಕ್ಷರತೆ ಪ್ರಮಾಣ ಸಾಧಿಸುವುದು ಭಾರತಕ್ಕೆ ಸಾಧ್ಯವಾಗಿಲ್ಲ, ಶೇಕಡ 24 ರಷ್ಟು ಅವಿದ್ಯಾವಂತರು ನಮ್ಮ ನಡುವೆ ಈಗಲೂ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಭಾರತೀಯರಿಗೆ ಕೇವಲ ರಾಜಕೀಯ ಸ್ವಾತಂತ್ರ್ಯ ಮಾತ್ರ ಸಿಕ್ಕಿದೆ, ಪ್ರತಿಯೊಬ್ಬ ವ್ಯಕ್ತಿಗೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಹೋದರೆ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾರ್ಥಕವೆನಿಸದು ಎಂದು ಅವರು ಹೇಳಿದರು.