ನಮ್ಮ ಬ್ಯಾಂಕುಗಳನ್ನು ಕಿತ್ತುಕೊಂಡ ಬಿಜೆಪಿಗರು ಈಗ ನಮ್ಮ ಹಾಲಿನ ಮೂಲಕ್ಕೆ ಕೈ ಹಾಕುತ್ತಿದ್ದಾರೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ‘ನಮ್ಮ ಬ್ಯಾಂಕುಗಳನ್ನು ಕಿತ್ತುಕೊಂಡು ನಮ್ಮ ಆರ್ಥಿಕತೆಯನ್ನು ನಾಶಮಾಡಲೆತ್ನಿಸಿದ ಬಿಜೆಪಿಯವರು ಇದೀಗ ನಮ್ಮ ಹಾಲಿನ ಮೂಲಕ್ಕೆ ಕೈ ಹಾಕುತ್ತಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ‘ನಮ್ಮ ಬ್ಯಾಂಕುಗಳನ್ನು ಕಿತ್ತುಕೊಂಡು ನಮ್ಮ ಆರ್ಥಿಕತೆಯನ್ನು ನಾಶಮಾಡಲೆತ್ನಿಸಿದ ಬಿಜೆಪಿಯವರು ಇದೀಗ ನಮ್ಮ ಹಾಲಿನ ಮೂಲಕ್ಕೆ ಕೈ ಹಾಕುತ್ತಿದ್ದಾರೆ ಈ ದುಷ್ಟ ಭಸ್ಮಾಸುರನ ಕೈಗೆ ಈಗಲೆ ಬರೆ ಹಾಕದಿದ್ದರೆ ನಮ್ಮ 25 ಲಕ್ಷ ರೈತ ಕುಟುಂಬಗಳನ್ನು ಬಿಜೆಪಿಯವರು ಬೀದಿಪಾಲು ಮಾಡಿ ಮಾರಾಟ ಮಾಡಿಬಿಡುತ್ತಾರೆಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ‘ನಂದಿನಿ’ ಜೊತೆ ಗುಜರಾತಿನ ‘ಅಮುಲ್’ ವಿಲೀನಗೊಳಿಸುವ ಕುರಿತು ಅಮಿತ್ ಶಾ ಸುಳಿವು ನೀಡಿದ್ದಾರೆ. ರಾಜ್ಯದ ಹಾಲು ಉತ್ಪಾದಕ ರೈತರು ಸುಮಾರು 20ಸಾವಿರ ಕೋಟಿ ರೂ. ಹಾಲಿನ ವಹಿವಾಟು ಮಾಡುತ್ತಾರೆ. ಈ ಲಕ್ಷಾಂತರ ಕುಟುಂಬಗಳ ಮನೆಯಲ್ಲಿ ದೀಪ ಬೆಳಗುವುದೆ ಹಾಲಿನಿಂದ. ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ಖರ್ಚಿನಿಂದ ಹಿಡಿದು, ಅಕ್ಕಿ, ಬೇಳೆ, ಬಟ್ಟೆ-ಬರೆ ಮುಂತಾದವುಗಳೆಲ್ಲ ಹಾಲಿನಿಂದಲೆ ಬರಬೇಕು. ಇಂತಹ ಚಿನ್ನದ ಮೊಟ್ಟೆ ಇಡುವ ಕೋಳಿಯ ಮೇಲೆ ಈಗ ಗುಜರಾತ್ ಕಾರ್ಪೊರೇಟ್ ಕುಳಗಳ ಕಣ್ಣು ಬಿದ್ದಿದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

Join Whatsapp