ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಸುಪ್ರಿಂ ಕೋರ್ಟ್ ಗೆ ಸಿದ್ದರಾಮಯ್ಯ ಧನ್ಯವಾದ

Prasthutha|

ಬೆಂಗಳೂರು: ಬರ ಪರಿಹಾರ ಬಿಡುಗಡೆ ವಿಷಯದಲ್ಲಿ ಸುಪ್ರೀಂ ಕೋರ್ಟ್ಗೆ ಕೇಂದ್ರ ಭರವಸೆ ನೀಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

- Advertisement -


2023ರ ಸೆಪ್ಟೆಂಬರ್ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುಧೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ ಎಂದು ಪೋಸ್ಟ್ ಮಾಡಿದ್ದಾರೆ.


ಕರ್ನಾಟಕ್ಕಕೆ ಬರ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.

- Advertisement -

Join Whatsapp