ಖರ್ಗೆ ರಾಜ್ಯ ಬಿಡದಿದ್ದರೆ ಬಿಜೆಪಿ ಸೇರುತ್ತೇನೆ ಎಂದು ಬೆದರಿಸಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ

Prasthutha|

ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೇ ಇದ್ದರೆ ಬಿಜೆಪಿ ಸೇರುತ್ತೇನೆ ಎಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನವರನ್ನು ಬೆದರಿಸಿದ್ದರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಸಮಾಜದ ನಾಯಕರ ಏಳಿಗೆಯನ್ನು ಸಿದ್ದರಾಮಯ್ಯ ಎಂದಿಗೂ ಸಹಿಸಿಲ್ಲ, ಸಹಿಸುವುದೂ ಇಲ್ಲ ಎಂದು ದೂರಿದರು.


ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಬದಲಾವಣೆ ನೋಡಿದ ಮೇಲೆ ಡಿ.ಕೆ. ಶಿವಕುಮಾರ್ ಭಾಷೆಯಲ್ಲಿ ಬದಲಾವಣೆ ಆಗುತ್ತಿದೆ. ಕಾಂಗ್ರೆಸ್ ಗೆ ಈಗ ಕುಮಾರಸ್ವಾಮಿಯೇ ಗುರಿ ಎಂದರು.



Join Whatsapp