Home ಟಾಪ್ ಸುದ್ದಿಗಳು ಸಂವಿಧಾನವೇ ಕುಸಿದುಬಿದ್ದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಒತ್ತಾಯ

ಸಂವಿಧಾನವೇ ಕುಸಿದುಬಿದ್ದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಬಿಜೆಪಿ ಸರ್ಕಾರ, ಅವರನ್ನು ಪೊಲೀಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ರ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು, ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದುಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬತ್ತಲು ಮಾಡಿಕೊಳ್ಳುತ್ತಿದೆ. ರೈತರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರದ ಕೃತ್ಯ ಖಂಡನೀಯ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version