Home ರಾಜ್ಯ ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಿ: ಸಿದ್ದರಾಮಯ್ಯ ಒತ್ತಾಯ

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಿ: ಸಿದ್ದರಾಮಯ್ಯ ಒತ್ತಾಯ

ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರ‌ದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ.‌ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ಮುಖ್ಯಮಂತ್ರಿಯವರು ಬಳಸಿಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಮುಖ್ಯಮಂತ್ರಿ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Join Whatsapp
Exit mobile version