ಮಾಂಸಾಹಾರ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿದ್ದು ಸರಿ: ಮುತಾಲಿಕ್ ಬೆಂಬಲ

Prasthutha|

ಹುಬ್ಬಳ್ಳಿ: ಮಾಂಸ ಸೇವನೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಸರಿ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ. ‘ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ‘ಮಾಂಸ ಸೇವನೆಯು ಒಂದು ಚರ್ಚೆಯ ವಿಷಯವೇ ಅಲ್ಲ. ಬಿಜೆಪಿಯವರು ಸುಮ್ಮನೆ ಸಿದ್ದರಾಮಯ್ಯ ಅವರನ್ನು ಎಳೆದು ತರುತ್ತಿದ್ದಾರೆ. ಈ ವಿಷಯದಲ್ಲಿ ಬಿಜೆಪಿಯ ವರ್ತನೆಯ ಅಸಹ್ಯ ತರಿಸುವಂತಿದೆ’ ಎಂದು ಹೇಳಿದ್ದಾರೆ.

Join Whatsapp