ಮೂರೂವರೆ ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ರಾಯರೆಡ್ಡಿ

Prasthutha|

ಮೈಸೂರು: ಇನ್ನೂ ಮೂರೂವರೆ ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

- Advertisement -


ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸನ್ನು ಮಾಡುವುದಿಲ್ಲ ಎಂದರು.


ರಾಜೀನಾಮೆ ಕೊಡ್ತೇನೆಂದು ಸಿದ್ದರಾಮಯ್ಯ ಬಾಂಡ್ ಪೇಪರ್ನ ಲ್ಲಿ ಬರೆದುಕೊಟಿದ್ದಾರಾ? ಅವರೇ ಇನ್ನೂ ಮೂರೂವರೆ ವರ್ಷ ಸಿಎಂ ಆಗಿರಬೇಕು. ಹೈಕಮಾಂಡ್ ಸಂಪೂರ್ಣವಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈ ಬಗ್ಗೆ ನನಗೂ ಮಾಹಿತಿ ಬಂದಿದೆ. ಸಿಎಂ ಸ್ಥಾನಕ್ಕಾಗಿ ಯಾರು ಸಹ ನಮ್ಮಲ್ಲಿ ಪ್ರಯತ್ನ ಮಾಡುತ್ತಿಲ್ಲ ಎಂದು ಅವರು ಹೇಳಿದರು.



Join Whatsapp