ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಮತ್ತೆ ಪುನರುಚ್ಛರಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 5 ವರ್ಷ ಇರ್ತಾರೋ, 3 ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ನೀವು ಅದನ್ನು ಹೈಕಮಾಂಡ್ ಗೆ ಕೇಳಿ. ಆದರೆ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಇದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ ಎಂದು ಹೇಳಿದರು.
ನಾನು ಅವರ ಜೊತೆಯಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ.ಸಿಎಂ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ. ವಿಪಕ್ಷಗಳು, ಮಾಧ್ಯಮಗಳು, ಚರ್ಚೆ ಮಾಡುತ್ತಿವೆ. ವಿಪಕ್ಷಗಳ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ ಅಷ್ಟೇ. ಆದರೆ ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆ, ಬೆಳವಣಿಗೆ ನಡೆದಿಲ್ಲ.ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ ಎಂದರು.