ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ: ಯತೀಂದ್ರ

Prasthutha|

ಹಾಸನ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ ಹೇಳಿದ್ದಾರೆ.

- Advertisement -


ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.


ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.



Join Whatsapp