Home ಟಾಪ್ ಸುದ್ದಿಗಳು ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿರುತ್ತಾರೆ: ದಿನೇಶ್ ಗುಂಡೂರಾವ್

ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿರುತ್ತಾರೆ: ದಿನೇಶ್ ಗುಂಡೂರಾವ್

ಬೀದರ್: ಐದು ವರ್ಷ ನಮ್ಮದೇ ಸರ್ಕಾರ ಇರುತ್ತೆ ಮತ್ತು ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಯಾವುದೇ ಸಂಶಯ ಬೇಡ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಿನ್ನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಮೀಟಿಂಗ್ ನಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪಾಲ್ಗೊಂಡಿರುವ ವಿಚಾರವಾಗಿ ಇಂದು ಬೀದರ್ ನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಹೀಗೆ ಹೇಳಿದ್ದಾರೆ. ಅಲ್ಲದೆ, ದಲಿತ ಮುಖ್ಯಮಂತ್ರಿ ವಿಚಾರವಾಗಿ ಅವರು, ಅದು ಆಗುವ ಸಮಯ ಸಂದರ್ಭ ಬರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸಮುದಾಯದ ಅಭಿವೃದ್ಧಿ ಬಗ್ಗೆ ನಾಯಕರು ಒಂದೆಡೆ ಸೇರಿ ಚರ್ಚೆ ನಡೆಸುತ್ತಾರೆ.ಐದು ವರ್ಷ ನಮ್ಮ ಸರ್ಕಾರ ಇರುತ್ತೆ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ.ಯಾವಾಗ ಬೇಕಾದರೂ ಸಚಿವ ಸಂಪುಟ ಪುನಾರಚನೆ ಆಗಬಹುದು. ಸಚಿವ ಸಂಪುಟ ಪುನರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

ವಿಪಕ್ಷದವರು ಒಳ್ಳೆಯ ಸಲಹೆ, ಟೀಕೆ ಮಾಡಿದ್ದರೆ ಒಪ್ಪಿಕೊಳ್ಳಬಹುದು. ಬಾಯಿಗೆ ಬಂದಂತೆ ಮಾತನಾಡಿದರೆ ಅದಕ್ಕೆಲ್ಲ ಉತ್ತರಿಸಲು ಸಾಧ್ಯವಿಲ್ಲ. ವಿರೋಧ ಪಕ್ಷದವರು ಪ್ರಚಾರಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

Join Whatsapp
Exit mobile version