Home ಜಾಲತಾಣದಿಂದ ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ: ಎಂ.ಬಿ ಪಾಟೀಲ್

ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ: ಎಂ.ಬಿ ಪಾಟೀಲ್

ಮೈಸೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂಬುದನ್ನು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲ ಹಗರಣಗಳನ್ನೂ ತನಿಖೆ ನಡೆಸಿ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಅವರು ಹೇಳಿದರು.

Join Whatsapp
Exit mobile version