ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಇದಕ್ಕಾಗಿ ಅವರು ಮೂರು ದಿನಗಳ ಕಾಲ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳಲ್ಲಿದ್ದಾರೆ.
ಜುಲೈ 19ರಂದು ಕೊಡಗು, 20 ಹಾಗೂ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.