ವರುಣಾದಲ್ಲಿ ಸಿದ್ದರಾಮಯ್ಯ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಗೆಲುವು

Prasthutha|

ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ವಿ.ಸೋಮಣ್ಣ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.

- Advertisement -

ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣ ಅವರು ಎರಡು ಕ್ಷೇತ್ರದಲ್ಲೂ ಸೋಲನುಭವಿಸಿ ಮುಖಭಂಗಕ್ಕೀಡಾಗಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ 15974 ಮತಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ.

- Advertisement -

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾಕ್ಷೇತ್ರ ತೀವ್ರ ರಾಜಕೀಯ ಜಿದ್ದಾಜಿದ್ದಿನ ಕ್ಷೇತ್ರವಾಗಿ ಬಿಂಬಿತವಾಗಿದ್ದು, ಈವರೆಗೆ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರಾ ನೇರ ಪೈಪೋಟಿ ನಡೆಯುತ್ತಿತ್ತು.

 ಆದರೆ ಈ ಬಾರಿ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿಯ ಸಿ.ಪಿಯೋಗೇಶ್ವರ್ ನಡುವೆ ನೇರ ಪೈಪೋಟಿ ನಡೆದು ಕುಮಾರಸ್ವಾಮಿ ಜಯಭೇರಿ ಭಾರಿಸಿದ್ದಾರೆ.



Join Whatsapp