ಬೆಂಗಳೂರು: ದೆಹಲಿಗೆ ಹೊರಟಿದ್ದ ನಮ್ಮ ರಾಜ್ಯದ ರೈತರನ್ನು ವಶಕ್ಕೆ ಪಡೆದು ಪೊಲೀಸರು ವಾರಾಣಸಿಗೆ ಸ್ಥಳಾಂತರಿಸುತ್ತಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆ ಮಾಡಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು, ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ನಮ್ಮ ರೈತರನ್ನು ವಶಕ್ಕೆ ಪಡೆದು ನಾಲ್ಕು ದಿವಸವಾಗಿದೆ. ಹೀಗಾಗಿ ರೈತರನ್ನು ಸ್ಥಳಾಂತರಿಸದೆ ಕೂಡಲೆ ಬಿಡುಗಡೆಗೊಳಿಸುವಂತೆ ಪತ್ರದ ಮೂಲಕ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ರೈತರ ಯೋಗಕ್ಷೇಮ ವಿಚಾರಿಸಿದರು.