ಸಿದ್ದರಾಮಯ್ಯ, ಝಮೀರ್ ಟಿಪ್ಪು ರಕ್ತ ಹಂಚಿಕೊಂಡು ಹುಟ್ಟಿದ್ದಾರೆ: ಮಾಜಿ ಸಚಿವ ಈಶ್ವರಪ್ಪ

Prasthutha|

ಶಿವಮೊಗ್ಗ: ಝಮೀರ್ ಅಹ್ಮದ್ ಅವರ ಚಾಮರಾಜನಗರ ಕ್ಷೇತ್ರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುರಕ್ಷಿತ. ಏಕೆಂದರೆ ಝಮೀರ್ ಅಹ್ಮದ್ ಹಾಗೂ ಸಿದ್ದರಾಮಯ್ಯ ಅವರು ಟಿಪ್ಪು ರಕ್ತ ಹಂಚಿಕೊಂಡು ಹುಟ್ಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸುವುದಿಲ್ಲ. ಒಂದೊಮ್ಮೆ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಮುನಿಯಪ್ಪ ಮತ್ತು ಶ್ರೀನಿವಾಸ್ ಪ್ರಸಾದ್ ಅವರೇ ಸಿದ್ದರಾಮಯ್ಯ ಗೆಲ್ಲಲು ಬಿಡುವುದಿಲ್ಲ. ಇವರೆಲ್ಲರ ಸೋಲಿಗೆ ಸಿದ್ದರಾಮಯ್ಯ ಕಾರಣವಾಗಿದ್ದಾರೆ, ಉಳಿದಂತೆ ರಾಜ್ಯದ 223 ಕ್ಷೇತ್ರಗಳಲ್ಲೂ ಸಿದ್ದರಾಮಯ್ಯ ಸೋಲಲಿದ್ದಾರೆ ಎಂದರು.

Join Whatsapp