ಖರ್ಗೆ ಬದಲು ರಾಹುಲ್ PM ಆಗಲಿ ಎಂದಿರುವ ಸಿದ್ದರಾಮಯ್ಯರದ್ದು ಸಂಕುಚಿತ ಮನೋಭಾವ: ಕುಮಾರಸ್ವಾಮಿ

Prasthutha|

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬದಲು ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದಿರುವ ಸಿಎಂ ಸಿದ್ದರಾಮಯ್ಯರದ್ದು ಸಂಕುಚಿತ ಮನೋಭಾವ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದವರು ಇದನ್ನು ಸೂಕ್ಷ್ಮವಾಗಿ ಗಮನಿಸಬೇಕು. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಖರ್ಗೆ ಪಿಎಂ ಅಭ್ಯರ್ಥಿಯಾಗಲಿ ಎಂದು ಹೇಳುತ್ತಾರೆ. ಇಂಡಿಯಾ ಒಕ್ಕೂಟದ ಕೆಲ ಮೈತ್ರಿ ಪಕ್ಷದವರು ಖರ್ಗೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಆದರೆ ಇಲ್ಲಿ ಅಹಿಂದ ಹೆಸರು ಹೇಳಿಕೊಂಡು ಅಧಿಕಾರ ಹಿಡಿದಿರುವ ಸಿದ್ದರಾಮಯ್ಯ ಏನು ಹೇಳುತ್ತಿದ್ದಾರೆ?. ರಾಹುಲ್ ಗಾಂಧಿ ಪಿಎಂ ಆಗಬೇಕು ಅನುತ್ತೀರಲ್ಲಾ?. ದಲಿತ ಸಮಾಜ ಇದನ್ನು ಗಮನಿಸಬೇಕು ಎಂದರು.

Join Whatsapp