ಹುಬ್ಬಳ್ಳಿ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ಹುಬ್ಬಳ್ಳಿಯಲ್ಲಿ ಟೀಕಾಪ್ರಹಾರ ನಡೆಸಿದ್ದು, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯ ಅವರದ್ದು ಸಾಬ್ರಕಾ ಸಾತ್ ಸಾಬ್ರಕಾ ವಿಕಾಸ್ ಘೋಷಣೆ ಎಂದು ವ್ಯಂಗ್ಯವಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂದು ಹೇಳಿದರೆ, ಸಿದ್ದರಾಮಯ್ಯ ಅವರು ಸಾಬ್ರಕಾ ಸಾತ್ ಸಾಬ್ರಕಾ ವಿಕಾಸ್ ಘೋಷಣೆ ಕೂಗುತ್ತಿದ್ದಾರೆ ಎಂದು ಕುಟುಕಿದರು.
ಬಹುಸಂಖ್ಯಾತರ ಮತಗಳು ತಮಗೆ ದೊರೆಯದು ಎಂದು ಸಿದ್ದರಾಮಯ್ಯ ಅವರಿಗೆ ಗ್ಯಾರಂಟಿ ಆಗಿದೆ. ಅದಕ್ಕಾಗಿ ತಾನು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.