Home ಟಾಪ್ ಸುದ್ದಿಗಳು ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ: ಮೈಸೂರಿನಲ್ಲಿ ಪ್ರತಿಭಟನೆ

ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ: ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಿಎಂ ತವರು ಮೈಸೂರಿನಲ್ಲಿ ಕೂಡ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಹಾಗೂ ಕೈಗೊಂಬೆ ಎಂದು ಘೋಷಣೆ ಕೂಗಲಾಗುತ್ತಿದೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನ ನ್ಯಾಯಾಲಯದ ಮುಂಭಾಗ ಸೇರಿರುವ ಪ್ರತಿಭಟನಾಕಾರರು ಮೋದಿ ಸೇವಕರಂತೆ ರಾಜ್ಯಪಾಲರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ಪಟ್ಟುಬಿಡದೆ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಸ್ಥಳದಲ್ಲಿ ಮಾನವ ಸರಪಳಿ ರಚನೆ ಮಾಡಿ ಅಂಗಿ ಬಿಚ್ಚಿ ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.


ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆ ತರೀಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯಪಾಲರು ಹಾಗು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತರೀಕೆರೆ ಪಟ್ಟಣದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಟ್ಟಣದ ಗಾಂಧಿ ವೃತದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಸಿಎಂ ವಿರುದ್ಧ ಇದು ಷಡ್ಯಂತರದ ಪ್ರಕರಣ ಎಂದು ಪ್ರತಿಭಟನೆ ನಡೆಸಿದರು.

Join Whatsapp
Exit mobile version