Home ಟಾಪ್ ಸುದ್ದಿಗಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೈದ ಅಭಿಮಾನಿಯ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೈದ ಅಭಿಮಾನಿಯ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಮಂಡ್ಯ : ತನ್ನ ಅಂತಿಮ ಸಂಸ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ಯಶ್ ಬರಬೇಕು ಎಂದು ಮಂಡ್ಯದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ, ತನ್ನ ಅಭಿಮಾನಿಯ ಕೊನೆಯ ಆಸೆ ಈಡೇರಿಸುವ ಉದ್ದೇಶದಿಂದ ಸಿದ್ದರಾಮಯ್ಯ, ಮೃತ ಯುವಕನ ಅಂತಿಮ ದರ್ಶನ ಪಡೆದರು.

ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಮಾನಿ ರಾಮನೃಷ್ಣನ ಅಂತಿಮ ದರ್ಶನ ಪಡೆದರು. ಯುವಕನ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಸಿದ್ದರಾಮಯ್ಯ ಜೊತೆ ಮಾಜಿ ಶಾಸಕ ಬಂಡಿಸಿದ್ದೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ತ್ಯಾಗರಾಜು ಸೇರಿದಂತೆ ಹಲವು ಮುಖಂಡರು ಅಂತಿಮ ದರ್ಶನ ಪಡೆದರು.

ಚಿಕ್ಕ ವಯಸ್ಸಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಬಹಳ ದೀರ್ಘಕಾಲ ಬಾಳಿ ಬದುಕಬೇಕಾದ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಎಷ್ಟೇ ಸಮಸ್ಯೆ ಇದ್ದರೂ, ಎದುರಿಸಬೇಕು. ಯಾರೂ ಆತ್ಮಹತ್ಯೆ ಮಾಡಿಕೊಳ್ಳುವಂತಹ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಈ ವೇಳೆ ಸಿದ್ದರಾಮಯ್ಯ ಹೇಳಿದರು.

ನಟ ಯಶ್ ಟ್ವೀಟ್ ಮೂಲಕ, ಮೃತ ಯುವಕನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.   

Join Whatsapp
Exit mobile version