‘ದೇಶದ ಜನತೆಗೆ ನಿಜವಾದ ಅಪರಾಧಿಗಳು ಯಾರೆಂದು ಗೊತ್ತು’: ಸಿದ್ದರಾಮಯ್ಯ

Prasthutha: March 26, 2021

► ಟಿಕಾಯತ್ ಮೇಲಿನ‌ ಪ್ರಕರಣ ಹಿಂಪಡೆಯುವಂತೆ ಒತ್ತಾಯ

ಬೆಂಗಳೂರು: ಕಳೆದ 4 ತಿಂಗಳಿನಿಂದ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳುವಳಿಯ ನೇತೃತ್ವ ವಹಿಸಿರುವ, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರಿಯ ನಾಯಕ ರಾಕೇಶ್ ಟಿಕಾಯತ್‌ ವಿರುದ್ದ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ FIR ದಾಖಲಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಿಕಾಯತ್ ಮೇಲಿನ ಪ್ರಕರಣವನ್ನು ಹಿಂಪಡೆಯುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

“ರೈತ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗ ಮತ್ತು ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿರುವುದು ಖಂಡನೀಯ. ತಾನೊಬ್ಬ ರೈತ ನಾಯಕನೆಂದು ಬಿಂಬಿಸುತ್ತಾ ಮುಖ್ಯಮಂತ್ರಿ ಪಟ್ಟಕ್ಕೇರಿರುವ ಯಡಿಯೂರಪ್ಪ ಅವರ ಅಸಲಿ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ತಕ್ಷಣ ಈ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ರೈತ ವಿರೋಧಿ ಬಿಜೆಪಿ ಪಕ್ಷದವರಿಗೆ ಕರಾಳ ಕೃಷಿ ಕಾಯ್ದೆಯನ್ನು ವಿರೋಧಿಸುವವರು ಅಪರಾಧಿಗಳಂತೆ ಕಾಣುವುದು ಸಹಜವೇ ಆಗಿದೆ. ಆದರೆ ದೇಶದ ಜನತೆಗೆ ನಿಜವಾದ ಅಪರಾಧಿಗಳು ಯಾರೆಂದು ಗೊತ್ತಾಗಿದೆ. ಪೊಲೀಸ್ ಬಲಪ್ರಯೋಗದಿಂದ ರೈತ ಶಕ್ತಿಯನ್ನು ಹಣಿಯಬಹುದೆಂದು ರಾಜ್ಯ ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ” ಎಂದು ಹೇಳಿ‌ ಅನ್ನದಾತರ ಬೆನ್ನಿಗೆ ಸಿದ್ದರಾಮಯ್ಯ ನಿಂತಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!