ಸಿದ್ದರಾಮಯ್ಯಗೆ ಜ್ವರ; ಆಸ್ಪತ್ರೆಗೆ ದಾಖಲು

Prasthutha|

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಂದಿನ ಎರಡು ದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

- Advertisement -

ಸಿದ್ದರಾಮಯ್ಯ ಈ ಹಿಂದೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರೂ ಅವರಿಗೆ ನೆಗೆಟಿವ್ ವರದಿ ಬಂದಿತ್ತು. ಸಿದ್ದರಾಮಯ್ಯ ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ನಿನ್ನೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಂತರ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರು ಅವರಿಗೆ ಎರಡು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ನಾಳೆ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

- Advertisement -