November 28, 2020

ರಾಜ್ಯದಲ್ಲಿ ಬಿಜೆಪಿ ಸರಕಾರ ತೊಲಗಿದರೆ ಉತ್ತಮ : ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಸರಕಾರ ತೊಲಗಿದರೆ ಉತ್ತಮ, ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಲಸಿಗ ಶಾಸಕರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಅವರು ಸಭೆ ಮಾಡಲಿ, ಬಿಡಲಿ ನಮಗೇನು? ಎಂದು ಪ್ರಶ್ನಿಸಿದ್ದಾರೆ. ಇವರು ವ್ಯಾಪಾರ ಮಾಡಿಕೊಂಡು ಬಿಜೆಪಿಗೆ ಹೋದವರು. ಅವರ ವ್ಯಾಪಾರ ನನಗೇನು ಗೊತ್ತು. ಅದರ ಬಗ್ಗೆ ನಾನು ಏನೂ ಹೇಳಲ್ಲ ಎಂದು ಹೇಳಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಕುಮಾರ್ ಆತ್ಮಹತ್ಯೆ ಯತ್ನ ವಿಷಯವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಸಂತೋಷ್ ಯಾರು? ಅವರ ಸಮಸ್ಯೆ ನಮಗೇನು ಗೊತ್ತು? ಅದು ಅವರ ವೈಯಕ್ತಿಕ ವಿಚಾರ. ರಾಜಕೀಯ ಒತ್ತಡ ಅದೆಲ್ಲ ಇದೆ ಅನ್ನುವುದು ನನಗೇನು ಗೊತ್ತು? ವಿಚಾರಣೆ ನಂತರ ಎಲ್ಲವೂ ಬರುತ್ತದೆ ಎಂದು ಹೇಳಿದರು.

ಲಿಂಗಾಯತ ಸಮುದಾಯ ಒಬಿಸಿಗೆ ಸೇರಿಸುವ ವಿಚಾರದಲ್ಲಿ ಪ್ರತಿಕ್ರಿಯಿಸಿರುವ ಅವರು, ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸುವುದಕ್ಕೆ ಒಂದು ಆಯೋಗವಿದೆ. ಪಟ್ಟಿಗೆ ಸೇರಿಸುವುದು, ಬಿಡುವುದು ಅದರ ನಿರ್ಧಾರಕ್ಕೆ ಬಿಟ್ಟಿದ್ದು. ಸೇರ್ಪಡೆ ಮಾಡಬಹುದೆಂದು ಆಯೋಗ ವರದಿ ನೀಡಬೇಕು. ವರದಿ ಬಂದ ನಂತರ ಅದರ ಬಗ್ಗೆ ಗಮನ ಹರಿಸಬಹುದು ಎಂದು ಹೇಳಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ