Home ಟಾಪ್ ಸುದ್ದಿಗಳು ಸಿದ್ದೇಶ್ವರ ಸ್ವಾಮಿ ನಿಧನ: ಶಾಲಾ-ಕಾಲೇಜುಗಳಿಗೆ ರಜೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಸಿದ್ದೇಶ್ವರ ಸ್ವಾಮಿ ನಿಧನ: ಶಾಲಾ-ಕಾಲೇಜುಗಳಿಗೆ ರಜೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ವಿಜಯಪುರ: ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ವಿಧಿವಶ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಕನಿಷ್ಠ 10 ಲಕ್ಷ ಮಂದಿ ಶ್ರೀಗಳ ದರ್ಶನಕ್ಕೆ ಬರುವ ನಿರೀಕ್ಷೆಯಿದ್ದು, ಜನವರಿ 3ರ ಮಧ್ಯಾಹ್ನ 3 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ದರ್ಶನಕ್ಕೆ ಬರುವವರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನೂ ಮಾಡಲಾಗುತ್ತದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.


ಅನಾರೋಗ್ಯದಿಂದ ಬಲುತ್ತಿದ್ದ ಖ್ಯಾತ ಪ್ರವಚನಕಾರ ಸಿದ್ದೇಶ್ವರ ಸ್ವಾಮಿ ಅವರನ್ನು ಆಶ್ರಮದ ಆಸ್ಪತ್ರೆಯಲ್ಲೇ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ವಿಧಿವಿಶರಾಗಿದ್ದಾರೆ.

Join Whatsapp
Exit mobile version