Home ಟಾಪ್ ಸುದ್ದಿಗಳು ದಾಸೋಹ ಸಂಸ್ಕಾರದ ಸಿದ್ದರಾಮಯ್ಯ: ಹೆಚ್.ಸಿ.ಮಹದೇವಪ್ಪ

ದಾಸೋಹ ಸಂಸ್ಕಾರದ ಸಿದ್ದರಾಮಯ್ಯ: ಹೆಚ್.ಸಿ.ಮಹದೇವಪ್ಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶರಣ ಸಂಸ್ಕೃತಿಯನ್ನು ತಮ್ಮ ಬದುಕಿನ ಆಚರಣೆಯನ್ನಾಗಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಬಸವ ಜಯಂತಿಯ ದಿನವನ್ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಯ್ಕೆ ಮಾಡಿಕೊಂಡರು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಶರಣ ಸಂಸ್ಕೃತಿಯ ಅನುಯಾಯಿಗಳಾದ ಸಿದ್ದರಾಮಯ್ಯ ಅವರು,  ಮುಖ್ಯಮಂತ್ರಿಯಾದ ಬಳಿಕ ಮೊದಲಿಗೆ ಸಹಿ ಹಾಕಿದ್ದು ದಾಸೋಹ ಸಂಸ್ಕೃತಿಯ ಅನ್ನ ಭಾಗ್ಯ ಯೋಜನೆಗೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋವನ್ನು ಕಡ್ಡಾಯಗೊಳಿಸಿದ್ದು ಸಿದ್ದರಾಮಯ್ಯ ಅವರು. ಹೀಗಾಗಿ ವಚನ ಕ್ರಾಂತಿ ಮತ್ತು ಶರಣ ಸಂಸ್ಕೃತಿಯ ಆಶಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದುಕು ಮತ್ತು ಆಚರಣೆಗಳಲ್ಲಿ ಇದೆ ಎಂದು ಹೆಚ್.ಸಿ.ಮಹದೇವಪ್ಪ ಅವರು  ವಿವರಿಸಿದರು.

ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಅರಣ್ಯ ಮತ್ತು ಪರಿಸರ ಸಚಿವ ಬಿ.ಈಶ್ವರ ಖಂಡ್ರೆ ಅವರು ವಹಿಸಿದ್ದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು “12ನೇ ಶತಮಾನದ ಶರಣ ದಂಪತಿಗಳು” ಕೃತಿಯನ್ನು ಬಿಡುಗಡೆ ಮಾಡಿದರು. ಬಸವೇಶ್ವರ ಪುತ್ಥಳಿ ದಾನ ಮಾಡಿದ ನೈಸ್ ಸಂಸ್ಥೆಯ ಮುಖ್ಯಸ್ಥರಾದ ಅಶೋಕ್ ಖೇಣಿ, ಶಾಸಕರುಗಳಾದ ಮಾಜಿ ಸಚಿವ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ದೃವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವೊಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಿ.ತಿಮ್ಮಯ್ಯ ಸೇರಿ ಮಾಜಿ ಶಾಸಕರು ಹಾಗೂ ನಾಯಕರುಗಳು ಉಪಸ್ಥಿತರಿದ್ದರು.

Join Whatsapp
Exit mobile version