ಲಾಠಿಯಿಂದ ಪ್ರತಿಭಟನೆ ಹತ್ತಿಕ್ಕಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ: ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಗೆ ಸಿದ್ದರಾಮಯ್ಯ ಕಿಡಿ

Prasthutha|

ಬೆಂಗಳೂರು: ಹೊಸ ಶಿಕ್ಷಣ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡನೀಯ. ವಿದ್ಯಾರ್ಥಿಗಳಿಗೆ ಮೋಸದ ಅರಿವಾಗಿ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿಯವರು ಪೊಲೀಸರ ಲಾಠಿಯಿಂದ ಪ್ರತಿಭಟನೆ ಹತ್ತಿಕ್ಕಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡುತ್ತಿರುವ ವೀಡಿಯೋ ತುಣುಕು ಒಂದನ್ನು ಹಂಚಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡ ಬೇಡಿ. ಪ್ರತಿಭಟನಾ ನಿರತ ವಿದ್ಯಾರ್ಥಿ ಗಳಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಮೊದಲು ಹೊಸ ಶಿಕ್ಷಣ ನೀತಿಯ ಜಾರಿಯನ್ನು ಸ್ಥಗಿತಗೊಳಿಸಿ. ವಿದ್ಯಾರ್ಥಿಗಳು,ಹೆತ್ತವರು ಹಾಗೂ ಶಿಕ್ಷಕರ ಜೊತೆ ಚರ್ಚಿಸಿ ನಂತರ ತೀರ್ಮಾನಕ್ಕೆ ಬನ್ನಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -


ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಂಗಳೂರಿನಲ್ಲಿಂದು ವಿಧಾನಸೌಧ ಮುತ್ತಿಗೆ ಹಮ್ಮಿಕೊಂಡಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಏಕಾಏಕಿ ಲಾಠಿ ಚಾರ್ಜ್ ನಡೆಸಿ ಬಂಧಿಸಿದ್ದರು. ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಖಂಡಿಸಿದ್ದಾರೆ.

Join Whatsapp