ಸಿದ್ದೀಕ್ ಕಾಪ್ಪನ್‌ಗೆ ಹಣ ನೀಡಿದ ಆರೋಪ: ಜೈಲಿನಲ್ಲಿರುವ ವಿದ್ಯಾರ್ಥಿ ನಾಯಕನಿಗೆ ಎಂಎ ಪರೀಕ್ಷೆಗೆ ಹಾಜರಾಗಲು ಕೋರ್ಟ್ ಅನುಮತಿ

Prasthutha|

ಲಕ್ನೋ: ಜೈಲಿನಲ್ಲಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ಮಾಜಿ ಪ್ರಧಾನ ಕಾರ್ಯದರ್ಶಿ ರೌಫ್ ಷರೀಫ್ ಅವರಿಗೆ ಎಂಎ (ರಾಜಕೀಯ ವಿಜ್ಞಾನ) ಪರೀಕ್ಷೆಗೆ ಹಾಜರಾಗಲು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು  ಅನುಮತಿ ನೀಡಿದೆ.

- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಬಳಿಕ ನಡೆದ ಬೆಳವಣಿಗೆಯೊಂದರಲ್ಲಿ ಯುಎಪಿಎ ಅಡಿಯಲ್ಲಿ ಬಂಧಿತರಾಗಿ ಉತ್ತರ ಪ್ರದೇಶದ ಲಕ್ನೋ ಜಿಲ್ಲಾ ಕಾರಾಗೃಹದಲ್ಲಿದ್ದರು.  ಜೈಲಿನೊಳಗಿದ್ದುಕೊಂಡೇ ರಾಜ್ಯಶಾಸ್ತ್ರದಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದ ಷರೀಫ್, ಆಗಸ್ಟ್ 24 ರಂದು ನಡೆಯಲಿರುವ ಪರೀಕ್ಷೆಗೆ ಹಾಜರಾಗಲು ಅನುಮತಿ ಕೋರಿ ಲಕ್ನೋದ ಪಿಎಂಎಲ್‌ಎ ವಿಶೇಷ ನ್ಯಾಯಾಲಯವನ್ನು ಸಂಪರ್ಕಿಸಿದ್ದರು.

ನ್ಯಾಯಾಲಯವು ಆಗಸ್ಟ್ 5 ರಂದು ಅವರ ಅರ್ಜಿಯನ್ನು ಪುರಸ್ಕರಿಸಿತು ಮತ್ತು ಅದಕ್ಕೆ ಅನುಕೂಲವಾಗುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತು. ಆದಾಗ್ಯೂ, ಜೈಲು ಕೈಪಿಡಿಯಲ್ಲಿ ಅಂತಹ ಯಾವುದೇ ನಿಬಂಧನೆ ಅಸ್ತಿತ್ವದಲ್ಲಿಲ್ಲ ಎಂದು ಹೇಳುವ ಮೂಲಕ ಜೈಲು ಅಧಿಕಾರಿಗಳು ಅವರ ಮನವಿಯನ್ನು ನಿರಾಕರಿಸಿದ್ದಾರೆ ಎಂದು ಶರೀಫ್ ವಕೀಲರು ಹೇಳಿದ್ದಾರೆ.

- Advertisement -

ನಂತರ ಶರೀಫ್ ಅವರು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಬೆಂಚ್ ಅನ್ನು ಸಂಪರ್ಕಿಸಿದರು, ಅದು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿತು. ಲಕ್ನೋದ ಮಾದರಿ ಜೈಲಿನ ಆವರಣದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜೈಲು ಅಧೀಕ್ಷಕರಿಗೆ ನ್ಯಾಯಾಲಯ ಸೂಚಿಸಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯ‌ ವರದಿಗೆಂದು ತೆರಳುತ್ತಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಮತ್ತು ಇತರ ಮೂವರ ಪ್ರಯಾಣಕ್ಕೆ ಹಣ ನೀಡಿದ ಆರೋಪದಲ್ಲಿ 2020 ರ ಡಿಸೆಂಬರ್‌ನಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ಗಳ ಅಡಿಯಲ್ಲಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

Join Whatsapp