ಸಿದ್ದೀಕ್ ಕಾಪ್ಪನ್ ಮುಂದಿನ ವಾರ ಬಿಡುಗಡೆ: ಲಕ್ನೋ ಜೈಲಿನ ಅಧಿಕಾರಿ

Prasthutha|

ಲಕ್ನೋ: ಕೇರಳದ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರನ್ನು ಲಕ್ನೋ ಜೈಲಿನಿಂದ ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸುಪ್ರೀಂ ಕೋರ್ಟ್ ಸಿದ್ದೀಕ್ ಅವರಿಗೆ ಶುಕ್ರವಾರ ಜಾಮೀನು ನೀಡಿದ ಬೆನ್ನಲ್ಲೇ ಜೈಲಿನ ಡಿಜಿಪಿ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಂತೋಷ್ ಕುಮಾರ್ ವರ್ಮಾ ಈ ಮಾಹಿತಿ ನೀಡಿದರು.

ಕಳೆದ ಕೆಲವು ತಿಂಗಳಿನಿಂದ ಸಿದ್ದೀಕ್ ಕಾಪ್ಪನ್ ಅವರನ್ನು ಲಕ್ನೋ ಜೈಲಿನಲ್ಲಿ ಇರಿಸಲಾಗಿತ್ತು.  ಜಾಮೀನು ಆದೇಶದ ಪ್ರತಿ ಸಲ್ಲಿಕೆಯಾದ ಬಳಿಕ  ಅವರನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಬಿಡುಗಡೆ ಮಾಡಲಾಗುವುದು ಎಂದು ಸಂತೋಷ್ ಕುಮಾರ್ ವರ್ಮಾ ತಿಳಿಸಿದ್ದಾರೆ.

- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವರದಿ ಮಾಡಲು ತೆರಳುತ್ತಿದ್ದಾಗ ಸಿದ್ದೀಕ್ ಕಾಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು UAPA ಕಾಯ್ದೆಯಡಿಯಲ್ಲಿ 2020ರ ಅಕ್ಟೋಬರ್ 5 ರಂದು ಬಂಧಿಸಿದ್ದರು. ಎರಡು ವರ್ಷಗಳಿಂದ ಜಾಮೀನು ನಿರಾಕರಿಸುತ್ತಾ ಬರಲಾಗುತ್ತಿತ್ತು. ಇದೀಗ  ಸುಪ್ರೀಮ್ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.



Join Whatsapp