ಲಕ್ನೋ: ಕೇರಳದ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರನ್ನು ಲಕ್ನೋ ಜೈಲಿನಿಂದ ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಸಿದ್ದೀಕ್ ಅವರಿಗೆ ಶುಕ್ರವಾರ ಜಾಮೀನು ನೀಡಿದ ಬೆನ್ನಲ್ಲೇ ಜೈಲಿನ ಡಿಜಿಪಿ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಂತೋಷ್ ಕುಮಾರ್ ವರ್ಮಾ ಈ ಮಾಹಿತಿ ನೀಡಿದರು.
ಕಳೆದ ಕೆಲವು ತಿಂಗಳಿನಿಂದ ಸಿದ್ದೀಕ್ ಕಾಪ್ಪನ್ ಅವರನ್ನು ಲಕ್ನೋ ಜೈಲಿನಲ್ಲಿ ಇರಿಸಲಾಗಿತ್ತು. ಜಾಮೀನು ಆದೇಶದ ಪ್ರತಿ ಸಲ್ಲಿಕೆಯಾದ ಬಳಿಕ ಅವರನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಬಿಡುಗಡೆ ಮಾಡಲಾಗುವುದು ಎಂದು ಸಂತೋಷ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವರದಿ ಮಾಡಲು ತೆರಳುತ್ತಿದ್ದಾಗ ಸಿದ್ದೀಕ್ ಕಾಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು UAPA ಕಾಯ್ದೆಯಡಿಯಲ್ಲಿ 2020ರ ಅಕ್ಟೋಬರ್ 5 ರಂದು ಬಂಧಿಸಿದ್ದರು. ಎರಡು ವರ್ಷಗಳಿಂದ ಜಾಮೀನು ನಿರಾಕರಿಸುತ್ತಾ ಬರಲಾಗುತ್ತಿತ್ತು. ಇದೀಗ ಸುಪ್ರೀಮ್ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.