ಅಮೃತಸರ: ಖ್ಯಾತ ಪಂಜಾಬ್ ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಶಾರ್ಪ್ ಶೂಟರ್ ಹರ್ಕಮಲ್ ರಾನು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಾವೇ ಖುದ್ದು ರಾನು ಎಂಬಾತನನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಈ ಮಧ್ಯೆ ಮೂಸೆವಾಲಾ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿರುವ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಸತೀಂದರ್’ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ವಿದ್ಯಾಭ್ಯಾಸ ವೀಸಾದಲ್ಲಿ ಕೆನಡಾಕ್ಕೆ ತೆರಳಿದ್ದ ಗೋಲ್ಡಿ ಬ್ರಾರ್ ಭಾರತಕ್ಕೆ ಹಿಂದಿರುಗಿರಲಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿವೆ.