ಸಿಧು ಮೂಸೆವಾಲಾ ಹತ್ಯೆಯ ಆರೋಪಿ ಪೊಲೀಸ್ ಕಸ್ಟಡಿಯಿಂದ ಪರಾರಿ

Prasthutha|

ಚಂಡೀಗಢ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿ, ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ನ ನಿಕಟವರ್ತಿ ಗ್ಯಾಂಗ್‌ಸ್ಟರ್ ದೀಪಕ್ ಟಿನು ಪಂಜಾಬ್ ಪೊಲೀಸರ ಅಪರಾಧ ತನಿಖಾ ಸಂಸ್ಥೆ (ಸಿಐಎ) ಘಟಕದ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

- Advertisement -

ತಪ್ಪಿಸಿಕೊಂಡ ದೀಪಕ್ ಟಿನು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆಪ್ತನಾಗಿದ್ದು, ಈತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿದ ಬಂಟಿಂಡಾ ರೇಂಜ್ನ ಐಜಿ, ಮುಖ್ವಿಂದರ್ ಸಿಂಗ್ ಚಿನ್ನ, ನಾವು ಈ ಬಗ್ಗೆ ಕಾರ್ಯ ಪ್ರವೃತ್ತರಾಗಿದ್ದು,ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆತನನ್ನು ಶೀಘ್ರದಲ್ಲೇ ಸೆರೆ ಹಿಡಿಯುತ್ತೇವೆ ಎಂದ್ದಿದ್ದಾರೆ.

ಸಿಧು ಮೂಸೆವಾಲಾ ಎಂದೇ ಜನಪ್ರಿಯರಾಗಿರುವ ಶುಭದೀಪ್ ಸಿಂಗ್ ಸಿಧು ಅವರನ್ನು ಮೇ 29ರಂದು ಪಂಜಾಬ್ ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Join Whatsapp