ಚಂಡೀಗಢ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿ, ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ನಿಕಟವರ್ತಿ ಗ್ಯಾಂಗ್ಸ್ಟರ್ ದೀಪಕ್ ಟಿನು ಪಂಜಾಬ್ ಪೊಲೀಸರ ಅಪರಾಧ ತನಿಖಾ ಸಂಸ್ಥೆ (ಸಿಐಎ) ಘಟಕದ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.
ತಪ್ಪಿಸಿಕೊಂಡ ದೀಪಕ್ ಟಿನು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆಪ್ತನಾಗಿದ್ದು, ಈತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿದ ಬಂಟಿಂಡಾ ರೇಂಜ್ನ ಐಜಿ, ಮುಖ್ವಿಂದರ್ ಸಿಂಗ್ ಚಿನ್ನ, ನಾವು ಈ ಬಗ್ಗೆ ಕಾರ್ಯ ಪ್ರವೃತ್ತರಾಗಿದ್ದು,ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆತನನ್ನು ಶೀಘ್ರದಲ್ಲೇ ಸೆರೆ ಹಿಡಿಯುತ್ತೇವೆ ಎಂದ್ದಿದ್ದಾರೆ.
ಸಿಧು ಮೂಸೆವಾಲಾ ಎಂದೇ ಜನಪ್ರಿಯರಾಗಿರುವ ಶುಭದೀಪ್ ಸಿಂಗ್ ಸಿಧು ಅವರನ್ನು ಮೇ 29ರಂದು ಪಂಜಾಬ್ ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.