ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಸಿಧು

Prasthutha|

ಅಮೃತಸರ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಶುಕ್ರವಾರ ನವಜೋತ್ ಸಿಂಗ್ ಸಿಧು ಹಿಂಪಡೆದಿದ್ದಾರೆ.

- Advertisement -

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಧು, ಈ ಹಿಂದೆ ನೀಡಿದ್ದ ನನ್ನ ರಾಜೀನಾಮೆಯನ್ನು ಹಿಂಪಡೆದಿದ್ದೇನೆ ಎಂದು ಘೋಷಿಸಿದರು.

ನೂತನ ಅಟಾರ್ನಿ ಜನರಲ್ ನೇಮಕದ ನಂತರ ನಾನು ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. ನಾನು ಈ ಹಿಂದೆ ರಾಜೀನಾಮೆ ನೀಡಿದ್ದರ ಹಿಂದೆ ಪಂಜಾಬ್ ನ ಹಿತಾಸಕ್ತಿ ಒಳಗೊಂಡಿತ್ತೇ ಹೊರತು ವೈಯಕ್ತಿಕ ಅಹಂಕಾರದ ಪ್ರಮೇಯವೇ ಇಲ್ಲ ಎಂದು ತಿಳಿಸಿದರು.

Join Whatsapp