ಭುವನೇಶ್ವರ್: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ನಡೆದ ಸರಣಿ ರೈಲು ದುರಂತಕ್ಕೆ ಸಿಗ್ನಲ್ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ಬಳಿಕ ಪ್ರಾಥಮಿಕ ವರದಿ ಸಲ್ಲಿಸಿದರು.
ಕೋರಮಂಡಲ್ ಎಕ್ಸ್ ಪ್ರೆಸ್ ಗೆ ಗೊತ್ತುಪಡಿಸಿದ ಮುಖ್ಯ ಮಾರ್ಗದಲ್ಲಿ ಚಲಿಸಲು ಹಸಿರು ನಿಶಾನೆ ತೋರಲಾಗಿತ್ತು. ಆ ಬಳಿಕ ಹಸಿರು ನಿಶಾನೆ ಹಿಂದೆ ಪಡೆಯಲಾಗಿದೆ. ಈ ವೇಳೆಗೆ ರೈಲು ಲೂಪ್ ಲೈನ್ ಅನ್ನು ಪ್ರವೇಶಿಸಿ, ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿತು. ಅಷ್ಟರಲ್ಲಿ ಡೌನ್ ಲೈನ್ ನಲ್ಲಿ ಯಶವಂತಪುರದಿಂದ ಬಂದ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದವು. ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ದುರಂತಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 300 ಕ್ಕೆ ಏರಿದೆ. ಅಲ್ಲದೇ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.