ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಅಗ್ನಿ ಅವಘಡ: 3 ಅಂಗಡಿಗಳಿಗೆ ಬೆಂಕಿ

Prasthutha|

- Advertisement -

ಸಿಕಂದರಾಬಾದ್: ತೆಲಂಗಾಣದ ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಇರುವ ಪಾಲಿಕಾ ಬಜಾರ್​ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಅಂಗಡಿ ಮುಂಗಟ್ಟುಗಳು ಬೆಂಕಿಗಾಹುತಿಯಾಗಿವೆ. ಬಜಾರ್‌ ನ ಬಟ್ಟೆ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಗಣನೀಯವಾಗಿ ಹರಡಿದೆ ಎಂದು ವರದಿಯಾಗಿದೆ.

ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರು. ಆದಾಗ್ಯೂ, ಅಂಗಡಿಯೊಳಗೆ ಅವಶೇಷಗಳ ಉಪಸ್ಥಿತಿಯಿಂದಾಗಿ ಬೆಂಕಿ ವೇಗವಾಗಿ ಹರಡುತ್ತಿದೆ ಎಂದು ವರದಿಯಾಗಿದೆ, ಇದರಿಂದಾಗಿ ಬೆಂಕಿ ನಂದಿಸುವ ಪ್ರಯತ್ನಗಳು ಸವಾಲಾಗಿವೆ