ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಇದುವರೆಗೆ ಏಳು ಸೇನಾ ಸಿಬ್ಬಂದಿ ಸೇರಿದಂತೆ ಸಾವಿನ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ.
ಇಲ್ಲಿಯವರೆಗೆ 142 ಜನ ನಾಪತ್ತೆಯಾಗಿದ್ದಾರೆ. ಈ ಪ್ರವಾಹವು 25,000 ಜನರ ಮೇಲೆ ಪ್ರಭಾವ ಬೀರಿದೆ. 12 ಸಾವಿರಕ್ಕೂ ಹೆಚ್ಚು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. 13 ಸೇತುವೆಗಳು ಕೊಚ್ಚಿಕೊಂಡು ಹೋಗಿದೆ ಎಂದು ಹೇಳಲಾಗಿದೆ. ಬುಧವಾರದಂದು ಉಂಟಾದ ಮೇಘಸ್ಫೋಟದಿಂದ ಅನೇಕ ನಷ್ಟ ಉಂಟಾಗಿದೆ ಎಂದು ಸರ್ಕಾರ ವರದಿಯಲ್ಲಿ ತಿಳಿಸಿದೆ.