ಕ್ರೈಸ್ತರ ಮೇಲಿನ ದಾಳಿ ಖಂಡಿಸಿ ಸಂತ ಜೋಸೆಫ್ ದೇವಾಲಯದಲ್ಲಿ ಮೌನ ಪ್ರತಿಭಟನೆ

Prasthutha|

ಮಂಗಳೂರು: ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕ್ರೈಸ್ತರು ಬುಧವಾರ ನೀರು ಮಾರ್ಗ ದಲ್ಲಿರುವ ಸಂತ ಜೋಸೆಫ್  ದೇವಾಲಯದಲ್ಲಿ ಮೌನ ಪ್ರತಿಭಟನೆ ನಡೆಸಿದರು.

- Advertisement -

ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಮತ್ತು  ಹಿಂದುಳಿದ ವರ್ಗಗಳ ಕಲ್ಯಾಣ  ಇಲಾಖೆಯು ರಾಜ್ಯದಲ್ಲಿನ ಕ್ರೈಸ್ತ  ಸಮುದಾಯದ ಚರ್ಚುಗಳು ಮತ್ತು ಸಂಘ-ಸಂಸ್ಥೆ ಗಳ ಗಣತಿಯನ್ನು ನಡೆಸಬೇಕೆಂದು ಆದೇಶ ನೀಡಿರುವುದರ ವಿರುದ್ಧ ಮತ್ತು ಇತ್ತೀಚಿನ ದಿನಗಳಲ್ಲಿ ಕ್ರೈಸ್ತರ ಪ್ರಾರ್ಥನಾಲಯಗಳ ಮೇಲೆ ನಡೆಯುವ ದಾಳಿಗಳನ್ನು ವಿರೋಧಿಸಿ ಈ ಮೌನ ಪ್ರತಿಭಟನೆಯನ್ನು ನಡೆಸಲಾಯಿತು.

ಇಡೀ ಮಂಗಳೂರು ಧರ್ಮ ಪ್ರಾಂತ್ಯದ ಎಲ್ಲಾ ಚರ್ಚುಗಳ  ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಪ್ರತಿಭಟನೆ ನಡೆಸಲಾಯಿತು.

Join Whatsapp